ಮಹಿಳಾ ಸಂಘ: ಮಾಹಿತಿ ಕಾರ್ಯಾಗಾರ
ದಿನಾಂಕ 3/9/2024 ರಂದು ಮಹಿಳಾ ಸಂಘದ ಆಶ್ರಯದಲ್ಲಿ ಕಾಲೇಜಿನ ಮಿನಿ ಸಭಾಂಗಣದಲ್ಲಿ ಪ್ರಥಮ ವರ್ಷದ ಎಲ್ಲಾ ವಿದ್ಯಾರ್ಥಿನಿಯರಿಗೆ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಬರ್ಟ್ ರೋಡ್ರಿಗಸ್ ಅವರು ವಹಿಸಿದರು. ಮಹಿಳಾ ವೇದಿಕೆಯ ಸಂಯೋಜಕರಾದ ಡಾ. ವಿದ್ಯಾಲತಾ ಹಾಗೂ ಶ್ರೀಮತಿ ಜ್ಯೋತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಹಿಳಾ ಆರೋಗ್ಯ, ಭದ್ರತೆ ಹಾಗೂ ಆತ್ಮವಿಶ್ವಾಸ ಕುರಿತು ಹಲವಾರು ಮಾಹಿತಿಗಳನ್ನು ವಿದ್ಯಾರ್ಥಿನಿಯರಿಗೆ ನೀಡಲಾಯ್ತು .ಕಾರ್ಯಾಗಾರದಲ್ಲಿ ವಿದ್ಯಾರ್ಥಿನಿಯರು ಸಕ್ರಿಯವಾಗಿ ಭಾಗವಹಿಸಿದರು .
No comments:
Post a Comment