ಎಸ್.ಎಂ.ಎಸ್ ಕಾಲೇಜಿನಲ್ಲಿ ಹಿಂದಿ ದಿನಾಚರಣೆ
ಬ್ರಹ್ಮಾವರ: ದಿನಾಂಕ 23/ 9/ 2025 ರಂದು ಎಸ್.ಎಂ.ಎಸ್.ಕಾಲೇಜು ಬ್ರಹ್ಮಾವರ ಇಲ್ಲಿ ಹಿಂದಿ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಸುಕನ್ಯಾ ಮಾರ್ಟಿಸ್ ಇವರು ರಾಷ್ಟ್ರೀಯ ಏಕತೆಯಲ್ಲಿ ಹಿಂದಿ ಭಾಷೆಯ ಮಹತ್ವವನ್ನು ತಿಳಿಸುವುದರ ಜೊತೆಗೆ ಹಿಂದಿ ಭಾಷೆಯಲ್ಲಿ ಉನ್ನತ ಶಿಕ್ಷಣ ಪಡೆದಾಗ ಸಿಗುವ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಬರ್ಟ್ ರೊಡ್ರಿಗಸ್ ಇವರು ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಭಾಷಾ ಕೌಶಲ್ಯ ಹೆಚ್ಚಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಹಿಂದಿ ವಿಭಾಗಾಧ್ಯಕ್ಷರಾದ ಡಾ. ಮಂಜುನಾಥ ಉಡುಪ ಕೆ ಇವರು ಕಾರ್ಯಕ್ರಮವನ್ನು ಆಯೋಜಿಸುವುದರ ಜೊತೆಗೆ ಈ ಸಂದರ್ಭದಲ್ಲಿ ಪ್ರಾಸ್ತಾವಿಕ ಮಾತನಾಡಿದರೆ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಜ್ಯೋತಿ ಅವರು ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಕುಮಾರಿ ಸೃಷ್ಟಿ ಮತ್ತು ಕುಮಾರಿ ಆಯಿಷಾ ನಿಸಾ ಇವರು ಕಾರ್ಯಕ್ರಮ ನಿರ್ವಹಿಸಿದರೆ ಕುಮಾರಿ ರೆಹನಾ ಬಾನು ವಂದಿಸಿದರು.
ಹಿಂದಿ ದಿನಾಚರಣೆಯ ಪ್ರಯುಕ್ತ ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಕ್ರಮವಾಗಿ ಕುಮಾರಿ ಆಯಿಷಾ ನಿಸಾ, ಕುಮಾರಿ ಶೃುತಿ ಪೂಜಾರಿ ಮತ್ತು ಕುಮಾರಿ ಮೆಹನಾಸ್ ಇವರು ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವನ್ನು ಗಳಿಸಿದರು.
No comments:
Post a Comment