ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಹರೀಶ್ ಟಿ.ಜಿ. ಅವರು ಕನಕದಾಸರ ಚಿಂತನೆಗಳು ಮತ್ತು ಸಾಮಾಜಿಕ ಆರೋಗ್ಯದ ನಡುವಿನ ಸಂಬಂಧವನ್ನು ವಿವರಿಸಿದರು. ಸಮಾಜದಲ್ಲಿ ಸಮಾನತೆ, ಸಹಬಾಳ್ವೆ, ಪರಸ್ಪರ ಗೌರವ, ಮಾನವೀಯತೆ ಹಾಗೂ ವೈಚಾರಿಕ ಮನೋಭಾವ ಬೆಳೆಸುವಲ್ಲಿ ಕನಕದಾಸರ ಸಾಹಿತ್ಯ ಮಹತ್ವದ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು. ವ್ಯಕ್ತಿಯ ಆರೋಗ್ಯವು ಕೇವಲ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸೀಮಿತವಾಗದೆ, ಸಾಮಾಜಿಕ ಸಂಬಂಧಗಳು ಮತ್ತು ಸಾಮರಸ್ಯವನ್ನೂ ಒಳಗೊಂಡಿದೆ. ಕನಕದಾಸರ ಕೀರ್ತನೆಗಳು ಜಾತಿಭೇದ, ಅಸಮಾನತೆ ಮತ್ತು ಸಾಮಾಜಿಕ ತಾರತಮ್ಯಗಳನ್ನು ಪ್ರಶ್ನಿಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುತ್ತವೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರೋಬರ್ಟ್ ರೋಡ್ರಿಗಸ್ ವಹಿಸಿದ್ದರು. ಕನಕದಾಸ ಅಧ್ಯಯನ ಸಂಶೋಧನ ಪೀಠ ಉಡುಪಿ ಇಲ್ಲಿಯ ಆಡಳಿತಾಧಿಕಾರಿಯಾಗಿರುವ ಡಾ. ಜಗದೀಶ್ ಶೆಟ್ಟಿಯವರು ಸ್ವಾಗತಿಸಿದರು. ಆರ್. ಆರ್. ಸಿ. ಉಡುಪಿಯ ಸಹಸಂಶೋಧಕರಾದ ಡಾ. ಅರುಣ್ ಕುಮಾರ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆದರ್ಶ್, ದ್ವಿತೀಯ ಬಿ.ಎ., ಕಾರ್ಯಕ್ರಮವನ್ನು ನಿರೂಪಿಸಿದರು. ಅಮೃತಾ ತೃತೀಯ ಬಿ. ಸಿ ಎ ಮತ್ತು ನಮ್ರತಾ ಪ್ರಥಮ ಬಿ. ಕಾಮ್ ಕನಕದಾಸರ ಕೀರ್ತನೆಯನ್ನು ಪ್ರಾರ್ಥನೆಯ ರೂಪದಲ್ಲಿ ಪ್ರಸ್ತುತಪಡಿಸಿದರು. ಎಸ್.ಎಂ.ಎಸ್. ಕಾಲೇಜಿನ ಉಪನ್ಯಾಸಕ ಪ್ರಶಾಂತ್ ಶೆಟ್ಟಿ ವಂದನಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

No comments:
Post a Comment